ಬಂಡಿಪುರ : ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ನಡೆದಿದ್ದು, ಸದ್ಯ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ.
ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದಾನೆ. ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಆನೆ ಆತನನ್ನು ನೆಲಕ್ಕೆ ತಳ್ಳಿದೆ. ಆನೆಯ ಕಾಲಿನ ಕೆಳಗೆ ಆತ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು ಇರಿಸಿದ್ದು, ಅದೃಷ್ಟವಶಾತ್ ಪ್ರವಾಸಿಗ ಪ್ರಾಣಾಪಾಯದಿಂದ ಬದುಕುಳಿದಿದ್ದಾನೆ.
ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ನಿಂತಿದ್ದ ಆನೆ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರವಾಸಿಗರ ಮೇಲೆ ಇದ್ದಕ್ಕಿದ್ದಂತೆ ಆನೆ ದಾಳಿ ನಡೆಸಿದೆ. ಕಾಡು ಆನೆಯನ್ನು ಕಂಡ ಆ ವ್ಯಕ್ತಿ ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವುದು ಕಂಡುಬರುತ್ತದೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
Risking your life for a selfie isn’t worth it.
A Kerala tourist in Bandipur learned the hard way after stepping out of his vehicle for a photo, only to be charged and trampled by a wild elephant.
Lucky to survive. 🐘🚫📸 #WildlifeSafety #Bandipur pic.twitter.com/1LJ3gYtGgz
— Gautam (@gautyou) August 11, 2025