ಬೆಂಗಳೂರು: ಬೆಂಗಳೂರಿನಲ್ಲಿ ಯುವಕನೊಬ್ಬ ಕೆಲಸ ಸಿಗದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ.
ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ. ಆದರೆ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.