ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಯುವತಿಯನ್ನು ಎಳೆದೊಯ್ದು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಬಿಹಾರ ಮೂಲದ ಯುವತಿಯನ್ನು ಅಣ್ಣ ಮಹದೇವಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಮುಕರು ಬೈಕ್ ಅಡ್ಡಗಟ್ಟಿ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.