ರಾಮನಗರ : ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಹೃದಯಾಘಾತದಿಂದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್ (18) ಮೃತ ಯುವಕ. ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದರು. ಕಳೆದ 3 ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.