ಶಿವಮೊಗ್ಗ : ಕಳೆದ ಎರಡು ದಿನಗಳ ಹಿಂದೆ ಅಷ್ಟೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಹೌದು 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.