ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 16 ವರ್ಷದ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಬಾಲಕಿ ಗರ್ಭಧಾರಣೆ ಮಾಡಿದ ಬಳಿಕ ಶಿಕ್ಷಕನೇ ಗರ್ಭಪಾತ ಮಾಡಿಸಿರುವ ಆರೋಪ ಸಹ ಕೇಳಿಬಂದಿದೆ.
ಈ ಒಂದು ಬೆಚ್ಚಿಬಿಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಒಂದು ಆರೋಪ ಬಂದಿದ್ದು, ಇದೀಗ ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.








