ನವದೆಹಲಿ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಹಳ್ಳಿಯೊಂದರಲ್ಲಿ 44 ವರ್ಷದ ತಂದೆಯೊಬ್ಬ 18 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಹೃದಯ ವಿದ್ರಾವಕ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯ ಪತ್ನಿ ಮನೆಯಿಂದ ಹೊರಗೆ ಹೋಗಿದ್ದಾಗ ಮತ್ತು ಆತನ ಮಗಳು ಒಂಟಿಯಾಗಿದ್ದಾಗ ಈ ಘಟನೆ ನಡೆದಿದೆ. ಸಂತ್ರಸ್ತೆ ಹೇಗೋ ಆರೋಪಿ ಹಿಡಿತದಿಂದ ತಪ್ಪಿಸಿಕೊಂಡು ಘಟನೆಯ ನಂತರ ತನ್ನ ಮಾವನನ್ನು ಸಂಪರ್ಕಿಸಿ ತನ್ನ ಕಷ್ಟವನ್ನು ವಿವರಿಸಿದಳು. ಮಾವನ ಮೂಲಕ ಮಾಹಿತಿ ಪಡೆದ ನಂತರ, ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ತಂದೆಯನ್ನು ಬಂಧಿಸಿ ಜೈಲಿಗೆ ಕಳುಹಿಸಿದರು.
ಮೂಲಗಳ ಪ್ರಕಾರ, ಮಹೋಬಾ ನಗರ ಪ್ರದೇಶದ ವೃತ್ತ ಅಧಿಕಾರಿ ದೀಪಕ್ ದುಬೆ ಮಾತನಾಡಿ, ಘಟನೆಯ ಬಗ್ಗೆ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಆರೋಪಿ ತಂದೆ ತನ್ನ ಮಗಳಿಗೆ ಬೆದರಿಕೆ ಹಾಕಿದ್ದಾನೆ, ಆದರೆ ಸಂತ್ರಸ್ತೆ ಧೈರ್ಯ ತಂದು ತನ್ನ ಮಾವನಿಗೆ ಎಲ್ಲವನ್ನೂ ಹೇಳಿದ್ದಾಳೆ. ಇದೀಗ ಪ್ರಕರಣ ಸಂಬಂಧ ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.