ಹೈದರಾಬಾದ್ : ಕೆಲಸದ ಒತ್ತಡದಿಂದ ಇತ್ತೀಚೆಗೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆಂಧ್ರಪ್ರದೇಶದಲ್ಲಿ ಕೆಲಸದ ಒತ್ತಡದಿಂದ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಸಾಫ್ಟ್ವೇರ್ ಇಂಜಿನಿಯರ್ ನಾಗ ಪ್ರಭಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಂಧ್ರಪ್ರದೇಶದ ನಾಗ ಪ್ರಭಾಕರ್ ಗಚ್ಚಿಬೌಲಿಯಲ್ಲಿರುವ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೋಕಾಪೇಟೆಯ ಹಾಸ್ಟೆಲ್ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಒತ್ತಡದಿಂದ ನಾಗ ಪ್ರಭಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರಾ? ಅಥವಾ ಬೇರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.