ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ. ಅನಿಲ್ (36) ತಾಯಿಯನ್ನೇ ಕೊಂದ ಮಗ.
ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.