ಹೈದರಾಬಾದ್ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಕೂಡಲೇ ಸ್ಥಳೀಯರು ಓರ್ವ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ .ಫೆಬ್ರವರಿ 20 ರ ರಾತ್ರಿ ಬಾಲಕಿ ವಸತಿ ಸಂಕೀರ್ಣದಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ನಡೆದಿದೆ.
ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ನೀಡಿ ಹತ್ತಿರದ ಪೊದೆಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿ ಹೋಗಿ ನೋಡಿದ್ದಾರೆ. ಈ ವೇಳೆ ಬಾಲಕಿಗೆ ತೀವ್ರ ಅಸ್ವಸ್ಥರಾಗಿರುವುದು ಕಂಡುಬಂದಿದೆ.ಸ್ಥಳಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.