ಹಾಸನ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಹಾಸನದಲ್ಲಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರು ಮೇಲೆ ಕೀಚಕರು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಅರೆಕೆರೆ ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಪಶುವೈದ್ಯರು ಕರುವಿಗೆ ಚಿಕಿತ್ಸೆ ನೀಡಿದ್ದಾರೆ.