ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಚಲಿಸುತ್ತಿದ್ದ ಬಸ್ ನಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ ಮಹಿಳೆಯೊಬ್ಬರು ಉಚ್ಚಂಗಿದುರ್ಗದ ಉಚ್ಚಂಗೆಮ್ಮನ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ಮಹಿಳೆ ದಾವಣಗೆರೆಗೆ ಹೊರಟಿದ್ದರು. ಬಸ್ ಗಾಗಿ ಮಹಿಳೆ ಮಂಗಳವಾರ ರಾತ್ರಿ ಕಾಯುತ್ತಿದ್ದರು. ಈ ವೇಳೆ ಬನಶಂಕರಿ ಎಂಬ ಹೆಸರಿನ ಖಾಸಗಿ ಬಸ್ ಬಂದಿದ್ದು, ಮಹಿಳೆ ಬಸ್ ಹತ್ತಿದ್ದಾರೆ. ಆ ಬಸ್ ನಲ್ಲಿ ಬರೀ 10 ಮಂದಿ ಪ್ರಯಾಣಿಕರು ಮಾತ್ರ ಇದ್ದರು. ಅವರೆಲ್ಲರೂ ತಮ್ಮ ಸ್ಟಾಪ್ ಬಂದಾಗ ಇಳಿದಿದ್ದಾರೆ. ಬಸ್ ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಮಾತ್ರ ಇದ್ದರು. ಇದನ್ನು ನೋಡಿದ ಆರೋಪಿಗಳು ಬಸ್ ನ ರೂಟ್ ಬದಲಾಯಿಸಿದ್ದಾರೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ. ಕೂಡಲೇ ಮಹಿಳೆ ಕಿರುಚಾಡಿದ್ದು, ಸಾರ್ವಜನಿಕರು ಮಹಿಳೆಯನ್ನು ರಕ್ಷಿಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಬಸ್ ಏಜೆಂಟ್ ನಲ್ಲಿ ಅರಸೀಕೆರೆ ಪೊಲೀಸರು ಬಂಧಿದ್ದಾರೆ. ಬಂಧಿತರನ್ನು ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್ (40) ಹಾಗೂ ಬಸ್ ಎಜೆಂಟ್ ಸುರೇಶ್ (46) ಎಂದು ಗುರುತಿಸಲಾಗಿದೆ.