ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಓರ್ವ ಆರೋಪಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಒಬ್ಬನಿಂದ ಅತ್ಯಾಚಾರ ನಡೆಸಲಾಗಿದೆ. ಅತ್ಯಾಚಾರದ ದೃಶ್ಯವನ್ನು ಮತ್ತೊಬ್ಬ ಆರೋಪಿ ವಿಡಿಯೋ ಮಾಡಿದ್ದ. ನಂತರ ಬಾಲಕಿಯನ್ನು ಮತ್ತೋರ್ವ ಆರೋಪಿಯೂ ಅತ್ಯಾಚಾರವೆಸಗಿದ್ದಾನೆ.
ಬಳಿಕ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋ ಸ್ನೇಹಿತರಿಗೆ ದುಷ್ಕರ್ಮಿಗಳು ಶೇರ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋವನ್ನು ಆರೋಪಿಗಳ ಸ್ನೇಹಿತರು ವೈರಲ್ ಮಾಡಿದ್ದಾರೆ.
ಗ್ಯಾಂಗ್ ರೇಪ್ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ ನಲ್ಲಿ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಾಳೆ.