ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, 6 ವರ್ಷದ ಬಾಲಕಿ ಮೇಎಲ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.
ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶ ಮೂಲದವನಾಗಿದ್ದಾನೆ.