ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ಕೃತ್ಯವೊಂದು ನಡೆದಿದ್ದು, 2 ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕೊಹಿನೂರ ಪಹಾಡ್ ಗ್ರಾಮದ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ.
ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ.
ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.