ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಇಂದು ಮುಂಜಾನೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
ಹೌದು,ಹಾಸನ ಜಿಲ್ಲೆಯ ಹೊಳೆನರಸೀಪುರದ ಕೊಂಗನಬೀಡು ಗ್ರಾಮದ ಆನಂದ್ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಈ ಹಿಂದೆ ಐಚನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಇಂದು ಬೆಳಗ್ಗೆ 4.00 ಸುಮಾರಿಗೆ ಆನಂದ್ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.