Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ

By kannadanewsnow57

ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಕಾರು ಚಾಲಕನನ್ನು ಅಡ್ಡಗಟ್ಟಿ ಬರೋಬ್ಬರಿ 27 ಲಕ್ಷ ರೂ ಹಣವನ್ನು ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ಮದ್ದೂರು ನಗರದಲ್ಲಿ ನಡೆದಿದೆ.

ಮೈಸೂರಿನ ಹಿಟಾಚಿ ಎಂಬ ಸಂಸ್ಥೆಯ 27 ಲಕ್ಷ ರೂ ಹಣವನ್ನು ಗೋವಿಂದರಾಜು ಎಂಬುವರು ಐ-20 ಕಾರಿನಲ್ಲಿ ಬೆಂಗಳೂರಿನ ಕೇಂದ್ರ ಕಛೇರಿಗೆ ತೆಗೆದುಕೊಂಡು ಹೋಗುವಾಗ ಮೈಸೂರಿನಿಂದ ಫಾಲೋ ಮಾಡಿರುವ ಮೂರ್ನಾಲ್ಕು ದುಷ್ಕರ್ಮಿಗಳ ಗುಂಪೊಂದು ಮದ್ದೂರು ನಗರದ ಐಶ್ವರ್ಯ ಇಂಟರ್ ನ್ಯಾಷನಲ್ ಸ್ಕೂಲ್ ಬಳಿ ಶುಕ್ರವಾರ ರಾತ್ರಿ 8 ಗಂಟೆ ವೇಳೆಯಲ್ಲಿ ಅಡ್ಡಗಟ್ಟಿದ್ದಾರೆ.

ಕೂಡಲೇ ಮಾರಕಾಸ್ತ್ರಗಳಿಂದ ಚಾಲಕ ಗೋವಿಂದರಾಜು ಅವರನ್ನು ಬೆದರಿಸಿ 27 ಲಕ್ಷ ರೂ ಹಣವನ್ನು ಕಿತ್ತುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಈ ಕೂಡಲೇ ಕಾರು ಚಾಲಕ ಮದ್ದೂರು ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತವಾದ ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿಗಳ ಪತ್ತೆಗೆ ಈಗಾಗಲೇ ತಂಡ ರಚನೆ ಮಾಡಲಾಗಿದ್ದು, ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇನ್ನು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೊಂಡ ದಿನದಿಂದ ಸಾಕಷ್ಟು ದರೋಡೆ ಪ್ರಕರಣಗಳು ನಡೆಯುತ್ತಿದ್ದವು, ಹೀಗಾಗಿ ಸಂಚಾರ ವಿಭಾಗದ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರು ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಹೆದ್ದಾರಿ ಪರಿಶೀಲನೆ ನಡೆಸಿ ಎಲ್ಲೆಲ್ಲಿ ದರೋಡೆ ಪ್ರಕರಣಗಳು ನಡೆಯುತ್ತಿದ್ದವು ಅಲ್ಲಿ ಸಿಸಿ ಕ್ಯಾಮೆರಾ, ಪೋಲೀಸ್ ಗಸ್ತು ವಾಹನ ವ್ಯವಸ್ಥೆ ಮಾಡಿದ ಪರಿಣಾಮ ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕಲಾಗಿತ್ತು. ಆದರೆ, ಶುಕ್ರವಾರ ರಾತ್ರಿ 8 ಗಂಟೆ ವೇಳೆಯಲ್ಲೇ ದರೋಡೆ ಪ್ರಕರಣ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮಾತ್ರ ಆತಂಕ ಸೃಷ್ಟಿಸಿದೆ.

ವರದಿ : ಗಿರೀಶ್ ರಾಜ್, ಮಂಡ್ಯ

SHOCKING: Another robbery in the state: Car driver intercepted and extorted Rs 27 lakh on the Bangalore-Mysore National Highway
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.