ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಶವಂತಪುರ ಸಮೀಪದ ಸೂಲಿವಾರದ ಬಳಿ ಮರಿಬಸವಯ್ಯ ಎಂಬುವವರ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪೈಶಾಚಿಕತೆ ಮೆರೆದಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಸುವಿನ ರೋಧನೆ ಕೇಳಿ ಓಡಿಬಂದ ಸ್ಥಳೀಯರು ಕೂಡಲೇ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ತೀವ್ರ ನೋವಿನಿಂದ ನರಳಿದ ಹಸು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಚುನಾವಣೆ ಸಂಬಂಧ 2 ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿತ್ತು, ಈ ಕಾರಣಕ್ಕೆ ಹಸುವಿನ ಕೆಚ್ಚಲು ಕತ್ತರಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.