ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಶನಿವಾರ ಯುವಕನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಗಾಯಗೊಂಡ ಬಾಲಕಿಯನ್ನು ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಬಾಲಕಿಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಪಿ ಜಕ್ಕಲ ವಿಘ್ನೇಶ್ (20) ಅರಣ್ಯದ ಏಕಾಂತ ಸ್ಥಳದಲ್ಲಿ ಈ ಕೃತ್ಯ ಎಸಗಿದ್ದಾನೆ. ಶನಿವಾರ ರಾತ್ರಿ ಆತನನ್ನು ಬಂಧಿಸಲಾಗಿದ್ದು, ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಶೇಷ ನ್ಯಾಯಾಲಯದಲ್ಲಿ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ಖಚಿತಪಡಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ.