ದಕ್ಷಿಣ ಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ ವಿಠಲ ಕುಂಬಾರ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.








