ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಕಾಮುಕರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದ ಬಳಿ ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆ ಯನ್ನು ಬೈಕ್ ನಲ್ಲಿ ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ ನಾಲ್ವರು ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








