ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ ಆಸ್ಪತ್ರೆಗೆ ಹೋದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
22 ವರ್ಷದ ಯೂವತಿಯೊಬ್ಬರಿಗೆ 56 ವರ್ಷದ ಚರ್ಮರೋಗ ತಜ್ಞ ಕಿರುಕುಳ ನೀಡಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಬೆಂಗಳೂರಿನ ಖಾಸಗಿ ಕ್ಲಿನಿಕ್ನಲ್ಲಿ ನಡೆದಿದೆ. ಯುವತಿ ತನ್ನ ತಂದೆ ಜತೆಗೆ ಕ್ಲಿನಿಕ್ ಗೆ ಭೇಟಿ ನೀಡಿದ್ದಾರೆ. ಯುವತಿ ಕ್ಲಿನಿಕ್ ಒಳಗೆ ಇರುವ ವೇಳೆ ಈ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪರೀಕ್ಷೆ ಮಾಡಬೇಕು ಎಂದು ವೈದ್ಯರು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.