ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಶಾಲಾ ವಿದ್ಯಾರ್ಥಿನಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ನಡೆದಿದೆ.
ಕಳೆದ ಸೋಮವಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಮಂಡ್ಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಗ್ರಾಮದ ಟಿ.ಜಿ.ರಾಮಯ್ಯನ ವಿರುದ್ಧ ಮದ್ದೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
65 ವರ್ಷದ ರಾಮಯ್ಯ ತೈಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಮನೆಗೆ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು, ಘಟನೆ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.