ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.
ಸದ್ಯ ಸಂತ್ರಸ್ತ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.








