ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಯುವಕನೊಬ್ಬ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಯುವಕನೊಬ್ಬ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಏಪ್ರಿಲ್ 30 ರಂದು ಈ ಘಟನೆ ನಡೆದಿದೆ. ರಾತ್ರಿ 11:30 ರ ವೇಳೆಗೆ ಯುವತಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಕಾಮುಕ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.
ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.