ರಾಜ್ಕೋಟ್ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗುಜರಾತ್ನ ರಾಜ್ಕೋಟ್ನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ವಿಕೃತಿ ಮೆರೆದಿದ್ದಾನೆ.
ದಾಹೋದ್ ಜಿಲ್ಲೆಯ ಒಂದು ಕುಟುಂಬ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅಟ್ಕೋಟ್ನಲ್ಲಿ ಬಾಲಕಿ ಮೇಲೆ ಯತ್ನ ವಿಫಲವಾಗಿದ್ದಕ್ಕೆ ಕೋಪಗೊಂಡ ಆರೋಪಿ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ಹಾಕಿದ್ದಾನೆ. 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಸದ್ಯ ಪೊಲೀಸರು ವಿಕೃತ ಆರೋಪಿ 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ಕಿರುಚಿದಾಗ ದಾಳಿಕೋರನು ಲೋಹದ ರಾಡ್ ಅನ್ನು ಆಕೆಯ ಖಾಸಗಿ ಭಾಗಗಳಿಗೆ ತುರುಕಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಆಕೆ ಹೊಲದ ಮಧ್ಯೆ ಬಿದ್ದಿರುವುದನ್ನು ನೋಡಿದ್ದಾರೆ.ತೀವ್ರ ರಕ್ತಸ್ರಾವವಾಗುತ್ತಿದ್ದ ಆಕೆಯನ್ನು ರಾಜ್ಕೋಟ್ ನ ಜನ್ನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








