ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯನ್ನು ಪುಸಲಾಯಿಸಿ ಇಬ್ಬರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ನಿನ್ನೆ ಸಂಜೆ ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ದಾಖಲಿಸಲಾಗಿದೆ.