ಬೀದರ್ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಮಗಳನ್ನ ಹೊಡೆದು ಬರ್ಬರ ಹತ್ಯೆ ಮಾಡಿದ್ದಾನೆ. ಕೊಲೆಯಾದವರನ್ನು ಮೋನಿಕಾ ಮೋತಿರಾಮ ಜಾಧವ್ ಎಂದು ಗುರುತಿಸಲಾಗಿದೆ.
ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಯುವಕನಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಆದರೆ ತಂದೆಯ ಎದುರು ಮಗಳು ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.