ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಟ್ಟಡದ ಮೂರನೇ ಮಹಡಿನ ಬಿದ್ದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್, ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪರೀಕ್ಷೆಯ ಒತ್ತಡವೋ ಅಥವಾ ವೈಯಕ್ತಿಕ ಕಾರಣಗಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








