ಚಾಮರಾಜನಗರ : ರಾಜ್ಯದಲ್ಲಿ ಹೃದಯಘಾತ ಸರಣಿ ಸಾವುಗಳು ಮುಂದುವರೆದಿದ್ದು, ನಿನ್ನೆ ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತ ಪಟ್ಟಿರುವುದು ಇದು ಎರಡನೇ ಪ್ರಕಾರಣವಾಗಿದೆ.
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಗುರುಸಿದ್ದು(55) ಮೃತ ದುರ್ದೈವಿ. ಯಳಂದೂರಿನಿಂದ ಗುಂಡ್ಲುಪೇಟೆಗೆ ತೆರಳುವ ಆರ್ಪಿಕೆ ಎಂಬ ಖಾಸಗಿ ಬಸ್ ಚಾಲಕರಾಗಿದ್ದ ಗುರುಸಿದ್ದು ಅವರಿಗೆ ಬಸ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ನ ಸಿಬ್ಬಂದಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪ್ರಾಥಮಿಕ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.
ಜಿಲ್ಲೆಯಲ್ಲಿ ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಎರಡನೇ ಪ್ರಕರಣ ಇದಾಗಿದೆ. ಹನೂರು ತಾಲೂಕಿನ ಮಿಣ್ಯಂ ಗ್ರಾಮದ ಖಾಸಗಿ ಬಸ್ ಚಾಲಕ ರಮೇಶ್ (47) ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಖಾಸಗಿ ಬಸ್ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದರು.