ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಕನಕಪುರ, ಧಾರವಾಡ ಹಾಗೂ ದಾವಣಗೆರೆಯಲ್ಲಿ ಓರ್ವ ಯುವತಿ ಹಾಗೂ ಇಬ್ಬರು ಯುವಕರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕೂಡ ಹಾರ್ಟ್ ಅಟ್ಯಾಕ್ ಗೆ ಚಾಲಕರು ಒಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.