ದಕ್ಷಿಣಕನ್ನಡ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಯಸ್ಸಿನ ಮಿತಿ ಎನ್ನದೆ ಹೃದಯಘಾತಕ್ಕೆ ಅನೇಕರು ಬಲಿಯಾಗುತ್ತಿದ್ದಾರೆ. ಇದೀಗ ರೈಲಲ್ಲಿ ಪ್ರಯಾಣಿಸುತ್ತಿರುವಾಗಲೇ ಗ್ರಾಮ ಪಂಚಾಯಿತಿ ಸದಸ್ಯರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿಯನ್ನು ಕುತ್ತಾರು ಮದನಿನಗರ ನಿವಾಸಿ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಅಝೀಝ್ ಆರ್.ಕೆ.ಸಿ (42) ಎಂದು ತಿಳಿದುಬಂದಿದೆ.ವ್ಯವಹಾರ ನಿಮಿತ್ತ ದೆಹಲಿಗೆ ತೆರಳಿ ವಾಪಸ್ಸಾಗುತ್ತಿದ್ದಾಗ ದಾರಿ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ತಕ್ಷಣ ಅವರನ್ನು ಮುಂದಿನ ನಿಲ್ದಾಣ ಕುಮಟಾದಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಅದಾಷ್ಟರಲ್ಲಾಗಲೇ ಅಬ್ದುಲ್ ಅಝೀಝ್ ನಿಧನರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮೃತರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.