ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯ ಪ್ರತಿಭಾನ್ವಿತ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದ ಖ್ಯಾತ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಜಿಮ್ ಮುಗಿಸಿ ಮನೆಗೆ ಮರಳಿದ ಕೆಲವೇ ಹೊತ್ತಿನಲ್ಲಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಸುಶೀಲ್ ಕುಮಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.
ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ಸುಶೀಲ್ ಕುಮಾರ್ ಹಠಾತ್ತನೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಸಾಧನೆಯ ಶಿಖರ ಏರಬೇಕಾಗಿದ್ದ 26 ವರ್ಷದ ಯುವ ಮಗನನ್ನು ಕಳೆದುಕೊಂಡ ಹೆತ್ತವರ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.








