ಹಾಸನ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೊಸ ವರ್ಷದ ಸಂಭ್ರಮಾಚರಣೆಗೆ ಗೋವಾಕ್ಕೆ ಹೋಗಿದ್ದ ಹಾಸನ ಮೂಲದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (25) ಹೊಸ ವರ್ಷಾಚಾರಣೆಗಾಗಿ ಗೋವಾ ಪ್ರವಾಸಕ್ಕೆ ಹೋಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಕ್ಷಿತ್ ಸಹೋದರು ಮತ್ತು ಸಂಬಂಧಿಕರ ಜೊತೆಗೆ ಡಿಸೆಂಬರ್ 31ರಂದು ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ನ್ಯೂ ಇಯರ್ ಪಾರ್ಟಿ ಮಾಡಿದ್ದರು. ಜನವರಿ 1ರಂದು ಬೆಳಿಗ್ಗೆ ತಿಂಡಿ ಮುಗಿಸಿ ರಕ್ಷಿತ್, ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಗೋವಾದಲ್ಲಿ ತಿರುಗಾಡುತ್ತಿದ್ದರು. ಈ ವೇಳೆ ರಕ್ಷಿತ್ ಹಠಾತ್ ಹೃದಯಾಘಾತಕ್ಕೊಳಗಾಗಿದ್ದಾರೆ. ತೀವ್ರ ಎದೆನೊವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ರಕ್ಷಿತ್ ಮೃತಪಟ್ಟಿದ್ದಾರೆ.








