ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಸ್ನೇಹಿತರೊಂದಿಗೆ ರೆಸ್ಟೋರೆಂಟ್ ಗೆ ಊಟಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನ ಮೇಘಾನಂದ (31) ಮೃತ ವ್ಯಕ್ತಿಯಾಗಿದ್ದು, ನಗರದ ಉಲ್ಲಾಳದಲ್ಲಿ ಪತ್ನಿ ಹಾಗೂ 5 ತಿಂಗಳ ಮಗುವಿನೊಂದಿಗೆ ವಾಸವಾಗಿದ್ದರು. ಖಾಸಗಿ ಬ್ಯಾಂಕ್ವೊಂದರಲ್ಲಿ ಮ್ಯಾನೇಜರ್ ಆಗಿ ಮೇಘಾನಂದ ಕಾರ್ಯನಿರ್ವಹಿಸುತ್ತಿದ್ದರು. ಆರ್.ಆರ್. ನಗರದ ಮುಖ್ಯರಸ್ತೆಯಲ್ಲಿರುವ ರೆಸ್ಟೋರೆಂಟ್ಗೆ ಮೂವರು ಸ್ನೇಹಿತರೊಂದಿಗೆ ಗುರುವಾರ ರಾತ್ರಿ ಊಟಕ್ಕೆ ತೆರಳಿದ್ದರು. ಊಟದ ನಂತರ ಬಿಲ್ ಪಾವತಿಸಿ ಹೊರ ಹೋಗಿದ್ದರು.
ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಶೌಚಗೃಹಕ್ಕೆ ಹೋಗಿರುವುದು ಕಂಡು ಬಂದಿದೆ. ತಕ್ಷಣ ಸ್ನೇಹಿತರು ಬಾಗಿಲು ತಟ್ಟಿ ಕೂಗಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಗಾಬರಿಯಾಗಿ ರೆಸ್ಟೋರೆಂಟ್ ಮ್ಯಾನೇಜರ್ಗೆ ತಿಳಿಸಿದ್ದಾರೆ. ಬಾಗಿಲು ಒಡೆದು ನೋಡಿದಾಗ ಮೇಘಾನಂದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.