ಭಟ್ಕಳ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಾಲಕ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಭಟ್ಕಳದಲ್ಲಿ ನಡೆದಿದೆ. ಮಣ್ಣುಳಿ ಗ್ರಾಮದ ಚಂದ್ರಶೇಖರ ಸುಬ್ಬಣ್ಣ ಪೂಜಾರಿ (64) ಮೃತ ಚಾಲಕ.
ಸೋಮವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಮನೆಯಿಂದ ಹೊರಟ ಚಂದ್ರಶೇಖರ, ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ್ದ ಬಸ್ಸನ್ನು ಚಲಾಯಿಸಿಕೊಂಡು ಬಂದು ಭಟ್ಕಳ ಬಸ್ ನಿಲ್ದಾಣದ ಎದುರಿನ ಖಾಸಗಿ ಬಸ್ ನಿಲುಗಡೆ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಿದರು. ಪ್ರಯಾಣಿಕರಿಗೆ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ತಕ್ಷಣವೇ ಮೃತಪಟ್ಟಿದ್ದಾರೆ.