ಮಂಗಳೂರು : ಕಳೆದ ಹಲವು ದಿನಗಳಿಂದ ಹೃದಯಘಾತದಿಂದ ಅನೇಕರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿ ಆಟೋ ಚಲಿಸುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕೊಕ್ಕಡದಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ಶರತ್ ಕುಮಾರ್ ಕೆ (36) ಎಂದು ತಿಳಿದುಬಂದಿದೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು.
ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು. ಸ್ಥಳೀಯರು ಕೂಡಲೇ ವಿಷಯ ಗಮನಿಸಿ ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು.