ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಎದೆನೋವಿನಿಂದ ಕುಸಿದು ಬಿದ್ದು ಹೊಲದಲ್ಲೇ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಎಸ್.ಐ, ಕೋಡಿಹಳ್ಳಿ ಗ್ರಾಮದ ನಿವಾಸಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರನ್ನು 55 ವರ್ಷದ ಶಿವಣ್ಣಗೌಡ ಎಂದು ಗುರುತಿಸಲಾಗಿದೆ.
ರೈತ ಶಿವಣ್ಣಗೌಡ ಇಂದು ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ ವೇಳೆಯೇ ದಿಢೀರನೆ ಹೃದಯಾಘಾತ ಸಂಭವಿಸಿದೆ. ಚಿಕಿತ್ಸೆ ಪಡೆಯುವ ಅವಕಾಶವೂ ಸಿಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.