ವಿಜಯನಗರ : ಇತ್ತೀಚಿಗೆ ದಿನಗಳಲ್ಲಿ ಹೃದಯಾಘಾತಕ್ಕೆ ಯುವಜನತೆ ಬಲಿಯಾಗುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಅಷ್ಟೆ ರಾಜ್ಯದಲ್ಲಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ವಿಜಯನಗರದಲ್ಲಿ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಹೃದಯಾಘಾತದಿಂದ ಸವಣ್ಣಪ್ಪಿದ್ದಾರೆ.
ಮೃತರನ್ನು ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆರ್.ದಾದಾ ಸಾಹೇಬ್ (51) ಎಂದು ತಿಳಿದುಬಂದಿದೆ.ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.