ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆಸ್ಪತ್ರೆಯ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಪುರಸಭೆ ಅಧ್ಯಕ್ಷರೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುರಸಭೆ ಅಧ್ಯಕ್ಷ ಹನುಮಂತಪ್ಪ ಸಾವನ್ನಪ್ಪಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬೈಕ್ ನಲ್ಲಿ ಆಸ್ಪತ್ರೆಗೆ ಬಂದಿದ್ದ ಹನುಮಂತಪ್ಪ, ವೈದ್ಯರ ಬಳಿ ಹೋಗಲು ಮೆಟ್ಟಿಲು ಹತ್ತುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.








