ಬೆಳಗಾವಿ: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದೆ.
ದುರ್ಗಾ ಕಾಲೋನಿಯಲ್ಲಿ ಸುನಿಲ್ ಮೂಲಿಮನಿ(33) ತನ್ನ ಕಂಪ್ಯೂಟರ್ ಶಾಪ್ ನಲ್ಲಿ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನಿಲ್ ಮಾಡಿಕೊಂಡಿದ್ದಾರೆ. 4 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಸುನಿಲ್ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಒಂದು ಮಗು ಇದೆ.
ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.