ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಠಾಣೆ ಎಲ್‌ಜೆ ಮೀರಾನಾಯಕ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಒಂದು ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ASI ಮೀರಾನಾಯಕ್ ಬಂದೋಬಸ್ತಿಗೆ ಬಂದಿದ್ದರು. ಈ ವೇಳೆ ಇಂದು ಮೀರಾನಾಯಕ ಅವರು ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾ ನಾಯಕ್ ಸಾವನ್ನಪ್ಪಿದ್ದಾರೆ.ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೀರಾ ನಾಯಕ್ ಮೃತದೇಹವನು ಶಿಫ್ಟ್ ಮಾಡಲಾಗಿದೆ.ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.