ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ.
ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ(20) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿಶಾ ಬಿಕಾಂ ಓದಲು ಶೃಂಗೇರಿ ಜೆಸಿಬಿಎಂ ಕಾಲೇಜಿನ ಹಾಸ್ಟೆಲ್ ನಲ್ಲಿ ಇದ್ದರು. ಮಂಗಳವಾರ ಸಂಜೆ ಎದೆ ನೋವಿನಿಂದ ಬಳಲಿದ ಅವರು ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಆರೋಗ್ಯವಾಗಿದ್ದ ದಿಶಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಏಕಾಏಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.







