ತೆಲಂಗಾಣ: ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ ಕ್ರಿಕೆಟ್ ಆಡುವಾಗಲೇ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತೆಲಂಗಾಣದ ಸಿಎಂಆರ್ ಕಾಲೇಜು ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡುತ್ತಿದ್ದ ಖಮ್ಮಮ್ ಜಿಲ್ಲೆಯ ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ ದುರಂತವಾಗಿ ಕುಸಿದುಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.
ಈ ಘಟನೆಯು ಸಹ ವಿದ್ಯಾರ್ಥಿಗಳನ್ನು ತೀವ್ರ ಆಘಾತಕ್ಕೀಡು ಮಾಡಿದೆ, ಏಕೆಂದರೆ ಅವರ ಸ್ನೇಹಿತ ಮೈದಾನದಲ್ಲಿ ಕುಸಿದು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ನೋಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.