ಬಾಗಲಕೋಟೆ : ರಾಜಸ್ಥಾನದಲ್ಲಿ ಕರ್ತವ್ಯ ನಿರತದಲ್ಲಿದ್ದ ಬಾಗಲಕೋಟೆ ಮೂಲದ ಯೋಧರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತ ಯೋಧರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಎಂದು ತಿಳಿದುಬಂದಿದೆ.ಮಾಗೊಂಡಯ್ಯ ಕಳೆದ 14 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ ಯುನಿಟ್ 19 ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತ ಯೋಧ ಮಾಗೊಂಡಯ್ಯ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಯೋಧ ರಾಜಸ್ಥಾನದಲ್ಲಿ ನೆಲೆಸಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜ. 15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.