ಹಾಸನ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಬ್ಯಾನ್ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ಬಸ್ ನಿಲ್ದಾಣದ ಬಳಿಯಿರುವ ಪುಷ್ಪಗಿರಿ ಲಾಡ್ಜ್ ನಲ್ಲಿ ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ (23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಟಾಟಾ ಕ್ಯಾಪಿಟಲ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ತಿಂಗಳಿಂದ ಆನ್ ಲೈನ್ ಗೇಮ್ ಆಡುತ್ತಿದ್ದ ಎನ್ನಲಾಗಿದೆ.
ರಮ್ಮಿ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ ರಾಕೇಶ್ ಗೌಡ ಇದೀಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮ್ಮಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿ ಎಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾನೆ.