ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಕಬ್ಬು ಕಟಾವು ಮಾಡುಗ ವೇಳೆ ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು ರೈತ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿಯಲ್ಲಿ ನಡೆದಿದೆ.
ಚಂದ್ರಯ್ಯ ಬಸಲಿಂಗಯ್ಯ ಮಠಪತಿ (65) ಮೃತ ದುರ್ದೈವಿ. ಜಮೀನಿನಲ್ಲಿ ಟ್ರ್ಯಾಕ್ಟರ್ ಕೆಲಸ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರೈತನ ಮೇಲೆ ಹರಿದಿದ್ದು, ಚಕ್ರಕ್ಕೆ ಸಿಲುಕಿದ ರೈತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ.








