ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಆನಂದ್- ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎನ್ನಲಾಗಿದೆ. ಡಿಸೆಂಬರ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಆಟವಾಡುತ್ತಾ ಮಗು ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಘಟನೆ ಸಂಬಂಧ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.