ಬೆಂಗಳೂರು : ಸಾಮಾನ್ಯವಾಗಿ ದುಡ್ಡು ಬಂಗಾರ ಬೆಳ್ಳಿ ಅಥವಾ ಯಾವುದೇ ಬೆಲೆ ಬಾಳುವ ವಸ್ತು ಕಳೆದುಕೊಂಡರೆ ದೂರು ನೀಡುವುದನ್ನು ಕೇಳಿದ್ದೇವೆ ಆದರೆ ಬೆಂಗಳೂರಿನಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ವ್ಯಕ್ತಿ ಒಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು ಗರ್ಭಿಣಿ ಬೆಕ್ಕು ಕಿಡ್ನಾಪ್ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಬೆಂಗಳೂರಿನಲ್ಲಿ 9 ಜನರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ fir ದಾಖಲಾಗಿದೆ. ವ್ಯಾನ್ಶಿ ಸಾಲೆಟರ್ ಅಪಾರ್ಟ್ಮೆಂಟ್ನಲ್ಲಿದ್ದ ಬೆಕ್ಕನ್ನು ಕಿಡ್ನಾಪ್ ಮಾಡಿದ್ದಾರೆ.
ಅಪಾರ್ಟ್ಮೆಂಟ್ ಸಿಬ್ಬಂದಿ ಸ್ಥಳಾಂತರ ಮಾಡಿದ್ದಾರೆ ಎಂದು ಹರೀಶ್ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಅಧ್ಯಕ್ಷ ಶ್ರೀ ರಾಮ್ ಸೆಕ್ಯೂರಿಟಿ ಮ್ಯಾನೇಜರ್ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು fir ದಾಖಲಿಸಿಕೊಂಡಿದ್ದಾರೆ.








