ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ಶಾಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು 9ನೇ ತರಗತಿ ವಿದ್ಯಾರ್ಥಿಯೊಬ್ಬ 10ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯು 10ನೇ ತರಗತಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಇರಿದಿದ್ದಾನೆ ಇದರಿಂದಾಗಿ ಅವನು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಈಗ ಶಾಲೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿ ಗಲಾಟೆ ಮಾಡುತ್ತಿದ್ದಾರೆ. ಪೊಲೀಸರು ಜನಸಮೂಹವನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಚಾಕುವಿನಿಂದ ದಾಳಿ ಮಾಡಿದ ವಿದ್ಯಾರ್ಥಿ ಅಶಿಸ್ತಿನ ದಾಖಲೆಯನ್ನು ಹೊಂದಿದ್ದಾನೆ ಮತ್ತು ಶಾಲೆಯು ಅವನ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಶಾಲೆಗೆ ನೋಟಿಸ್ ನೀಡಲಾಗಿದ್ದು, ಘಟನೆಯ ಬಗ್ಗೆ ಉನ್ನತ ಅಧಿಕಾರಿಗಳಿಗೆ ತಿಳಿಸದಿದ್ದಕ್ಕಾಗಿ ವಿವರಣೆಯನ್ನು ಕೋರಲಾಗಿದೆ.
अहमदाबाद में 10वीं के छात्र की हत्या पर भड़का गुस्सा
◆ गुस्साए अभिभावकों का प्रदर्शन, करी तोड़फोड़
◆ दो बच्चों के बीच मामूली झगड़े ने हत्या और सांप्रदायिक तनाव का खौफनाक रूप ले लिया#Ahmedabad | #BreakingNews | Murder stabbed pic.twitter.com/zCDWs1Y0Wc
— News24 (@news24tvchannel) August 20, 2025